ಮೂರ್ನಾಡು ರಸ್ತೆಯ ಕವಿಗೋಷ್ಠಿಯ ಪತ್ರಿಕಾ ವರದಿಗಳು

ದಿನಾಂಕ ೮/೯/೨೦೧೯ ರ ಭಾನುವಾರದಂದು ಬೆಳಿಗ್ಗೆ ೧೦:೨೦ ಗಂಟೆಗೆ ವಿರಾಜಪೇಟೆ ನಗರದ ಮೂರ್ನಾಡು ರಸ್ತೆಯ ಮನೆ ಮನೆ ಕಾವ್ಯಗೋಷ್ಠಿ ಪರಿವಾರ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಸಾಹಿತ್ಯ ಸಂಘಟನೆಯ ಹನ್ನೊಂದನೆಯ ಕವಿಗೋಷ್ಠಿ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಮೂರ್ನಾಡು ರಸ್ತೆಯ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯು ವಹಿಸಿಕೊಂಡಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಆಗಿರುವ ಶ್ರೀ ದಾಮೋದರ ಆಚಾರ್ಯ ಎನ್ ವಹಿಸಿದ್ದರು. ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಟಿ ಪಿ ಕೃಷ್ಣರವರು ಉದ್ಘಾಟನೆ ಮಾಡಿದರು. ವೇದಿಕೆಯಲ್ಲಿ  ಸೋಮಣ್ಣ ಬಿ ಪಿ ಮನೆ ಮನೆ ಕಾವ್ಯಗೋಷ್ಠಿ ಪರಿವಾರ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ವಿರಾಜಪೇಟೆ ತಾಲ್ಲೂಕಿನ ಅಧ್ಯಕ್ಷರಾದ ಮಳುವಂಡ ನಳಿನಿ ಬಿಂದು ಉಪಸ್ಥಿತರಿದ್ದರು. ಪೊನ್ನಂಪೇಟೆ ತಾಲೂಕಿನ ಮನೆ ಮನೆ ಕಾವ್ಯಗೋಷ್ಠಿ ಪರಿವಾರ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಜಯಲಕ್ಷ್ಮಿ ಎಂ ಬಿ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಮನೆ ಮನೆ ಕಾವ್ಯಗೋಷ್ಠಿ ಪರಿವಾರದ ಸಂಚಾಲಕ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಪಿ ಎಸ್ ವೈಲೇಶ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸುಮಾರು ೧೮ ಕವಿ ಕವಯತ್ರಿಯರು ಕವನ ವಾಚನ ಮಾಡಿದರು. ಕೃತಿಮ ಚೆಂಗಪ್ಪ ಇವರ ಗೀತೆಗೆ ಸದಾನಂದ ಪುರೋಹಿತ್ ರವರು ತಮ್ಮ ಕುಂಚದಲ್ಲಿ ಸುಂದರ ಗಣಪನ  ಚಿತ್ರವನ್ನು ಬಿಡಿಸಿದರು. ಮೀರಾ ಶಂಭು  ಹಾಗೂ ಮಳುವಂಡ ನಳಿನಿ ಬಿಂದು ಗೀತ ಗಾಯನಕ್ಕಾಗಿ ಹಾಡಿದರು. ಬಳಿಕ ರಸ ಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು.

ಹರೀಶ್ ಕಿಗ್ಗಾಲುರವರ ನಿರೂಪಣೆಯಲ್ಲಿ ಮೂಡಿ ಬಂದ ಸುಂದರ ಕಾರ್ಯಕ್ರಮದಲ್ಲಿ ಸೌಮ್ಯ ಕೆ. ಎಂ ಸ್ವಾಗತಿಸಿದರು. ಮೀರಾ ಶಂಭುರವರು ವಂದಿಸಿದರು. ಕಾರ್ಯಕ್ರಮವನ್ನು ಪ್ರಾಯೋಜಿಸಿದ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳನ್ನು ಆತ್ಮೀಯವಾಗಿ ಗೌರವಿಸಲಾಯಿತು




Comments

Popular posts from this blog

ನಾ ಕಂಡಂತೆ ಕವಿ ಸಾಹಿತಿಗಳು:- ಡಾಕೇಶ್ ತಾಳಗುಂದ

ನಾ ಕಂಡಂತೆ ಕವಿ ಸಾಹಿತಿಗಳು:- ಅನುಪಮಾ ಸುಲಾಖೆ.

ಗಝಲ್ ಎಂದರೇನು